Genesis 27:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಹೋದನು. ಇಸಾಕನು ಅವನನ್ನು ಮುಟ್ಟಿ, “ನಿನ್ನ ಸ್ವರ ಯಾಕೋಬನ ಸ್ವರವಿದ್ದಂತಿದೆ. ಆದರೆ ನಿನ್ನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿವೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ತನ್ನ ತಂದೆಯ ಹತ್ತಿರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ ಯಾಕೋಬನ ಸ್ವರವಾಗಿದೆ, ಕೈಗಳು ಏಸಾವನ ಕೈಗಳು” ಎಂದು ಹೇಳಿದನು.
Kannada BSI Bible 2016
ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ತನ್ನ ತಂದೆಯ ಹತ್ತರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ - ಸ್ವರವೇನೋ ಯಾಕೋಬನ ಸ್ವರ, ಕೈ ಏಸಾವನ ಕೈ ಅಂದುಕೊಂಡನು.
Kannada Bible (KNCL) BSI 2016
ಯಕೋಬನು ಹತ್ತಿರಕ್ಕೆ ಬಂದಾಗ ತಂದೆ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ ಯಕೋಬನ ಸ್ವರ; ಆದರೆ ಕೈ ಏಸಾವನ ಕೈ,” ಎಂದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಕೋಬನು ತನ್ನ ತಂದೆ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ, “ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು,” ಎಂದು ಹೇಳಿದನು.