Genesis 27:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಯಾಕೋಬನೆಂಬುದು ಇಸಾಕನಿಗೆ ತಿಳಿಯಲಿಲ್ಲ. ಯಾಕೆಂದರೆ ಅವನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿದ್ದವು. ಆದ್ದರಿಂದ ಇಸಾಕನು ಯಾಕೋಬನನ್ನು ಆಶೀರ್ವದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು.
Kannada BSI Bible 2016
ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನ ಕೈಗಳು ಅವನ ಅಣ್ಣನ ಕೈಗಳಂತೆ ರೋಮವುಳ್ಳವುಗಳಾಗಿದ್ದದರಿಂದ ಇಸಾಕನು ಅವನ ಗುರುತನ್ನು ತಿಳಿಯಲಾರದೆ ಅವನನ್ನು ಆಶೀರ್ವದಿಸಿದನು.
Kannada Bible (KNCL) BSI 2016
ಯಕೋಬನ ಕೈಗಳು ಅವನ ಅಣ್ಣನ ಕೈಗಳಂತೆ ರೋಮಮಯವಾಗಿ ಇದ್ದುದರಿಂದ ಇಸಾಕನು ಅವನ ಗುರುತನ್ನು ತಿಳಿಯಲಾರದೆ ಅವನನ್ನು ಆಶೀರ್ವದಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಕೈಗಳು ಅವನ ಅಣ್ಣ ಏಸಾವನ ಕೈಗಳಂತೆ ರೋಮಮಯವಾಗಿ ಇದ್ದುದರಿಂದ, ಅವನು ಯಾರೆಂದು ತಿಳಿಯದೆ, ಅವನನ್ನು ಆಶೀರ್ವದಿಸಿದನು.