Genesis 27:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಇಸಾಕನು, “ಊಟವನ್ನು ತೆಗೆದುಕೊಂಡು ಬಾ. ನಾನು ಊಟಮಾಡಿ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಅಂತೆಯೇ ಯಾಕೋಬನು ಊಟವನ್ನು ತಂದು ಕೊಟ್ಟಾಗ ಊಟಮಾಡಿದನು; ದ್ರಾಕ್ಷಾರಸವನ್ನು ಕುಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು.
Kannada BSI Bible 2016
ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸಾಕನು - ಆ ಪದಾರ್ಥವನ್ನು ಹತ್ತರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೇ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನೆಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತರಕ್ಕೆ ತರಲು ಅವನು ತಿಂದನು; ದ್ರಾಕ್ಷಾರಸವನ್ನು ಕೊಡಲು ಕುಡಿದನು.
Kannada Bible (KNCL) BSI 2016
ಆಗ ಇಸಾಕನು, “ಊಟಮಾಡಲು ಆ ಬೇಟೆಮಾಂಸವನ್ನು ತಂದು ಬಡಿಸು, ಆಮೇಲೆ ನಿನ್ನನ್ನು ಆಶೀರ್ವದಿಸುತ್ತೇನೆ,” ಎಂದನು. ಅಂತೆಯೇ ಯಕೋಬನು ಹತ್ತಿರಕ್ಕೆ ತಂದು ಬಡಿಸಿದಾಗ ಇಸಾಕನು ಊಟಮಾಡಿದನು; ಕೊಟ್ಟ ದ್ರಾಕ್ಷಾರಸವನ್ನು ಕುಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸಾಕನು, “ನನ್ನ ಮಗನೇ, ನೀನು ತಂದದ್ದನ್ನು ಕೊಡು, ಊಟಮಾಡಿ, ನಿನ್ನನ್ನು ಆಶೀರ್ವದಿಸುವೆನು,” ಎಂದನು. ಆಗ ಯಾಕೋಬನು ಅದನ್ನು ಹತ್ತಿರ ತೆಗೆದುಕೊಂಡು ಬಂದಾಗ ಅವನು ಊಟಮಾಡಿದನು. ಅವನು ದ್ರಾಕ್ಷಾರಸವನ್ನು ತಂದಾಗ, ಅದನ್ನು ಕುಡಿದನು.