Genesis 27:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಸಾವನು ಸಹ ತನ್ನ ತಂದೆಗೆ ಇಷ್ಟವಾದ ರೀತಿಯಲ್ಲಿ ವಿಶೇಷವಾದ ಆಹಾರವನ್ನು ಸಿದ್ಧಪಡಿಸಿ ತನ್ನ ತಂದೆಯ ಬಳಿಗೆ ತೆಗೆದುಕೊಂಡು ಬಂದನು. ಅವನು ತನ್ನ ತಂದೆಗೆ, “ಅಪ್ಪಾ ಎದ್ದೇಳು, ನಿನಗೋಸ್ಕರ ನಿನ್ನ ಮಗನು ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ತಿನ್ನು, ನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು.
Kannada BSI Bible 2016
ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ - ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು ಎಂದು ಹೇಳಿದನು.
Kannada Bible (KNCL) BSI 2016
ಅವನು ಕೂಡ ಸವಿ ಊಟವನ್ನು ಅಣಿಮಾಡಿ ತಂದೆಯ ಬಳಿಗೆ ತಂದು, “ಅಪ್ಪಾ, ಏಳಿ; ನಿನ್ನ ಮಗನಾದ ನಾನು ತಂದಿರುವ ಬೇಟೆಯ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸಿ,” ಎಂದು ಕೇಳಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನೂ ಸಹ ರುಚಿಯಾದ ಊಟವನ್ನು ಸಿದ್ಧಮಾಡಿ, ತನ್ನ ತಂದೆಯ ಬಳಿಗೆ ತಂದು, “ನನ್ನ ತಂದೆಯೇ, ಎದ್ದು ನನ್ನನ್ನು ಆಶೀರ್ವದಿಸುವಂತೆ ನಿನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡು,” ಎಂದನು.