Genesis 27:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸಾಕನು, “ಇಲ್ಲ, ತುಂಬ ತಡವಾಯಿತು. ನಿನ್ನ ಮೇಲೆ ಆಡಳಿತ ಮಾಡುವ ಅಧಿಕಾರವನ್ನು ನಾನು ಯಾಕೋಬನಿಗೆ ಕೊಟ್ಟಿದ್ದೇನೆ. ಅವನ ಸಹೋದರರೆಲ್ಲ ಅವನಿಗೆ ಸೇವಕರಾಗಿರುವರು ಎಂದು ನಾನು ಹೇಳಿದ್ದೇನೆ. ಅವನಿಗೆ ಬೇಕಾದಷ್ಟು ದವಸಧಾನ್ಯಗಳೂ ದ್ರಾಕ್ಷಾರಸವೂ ದೊರೆಯುವಂತೆ ಆಶೀರ್ವಾದ ಮಾಡಿದ್ದೇನೆ. ನಿನಗೆ ಕೊಡಲು ನನ್ನಲ್ಲಿ ಏನೂ ಉಳಿದಿಲ್ಲ ಮಗನೇ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು.
Kannada BSI Bible 2016
ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸಾಕನು - ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇವಿುಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ ಅಂದನು.
Kannada Bible (KNCL) BSI 2016
ಆಗ ಇಸಾಕನು, “ಅವನನ್ನು ನಿನಗೆ ಒಡೆಯನನ್ನಾಗಿ ನೇಮಿಸಿದ್ದೇನೆ; ಸಹೋದರರನ್ನೇ ಅವನಿಗೆ ಕೆಲಸಗಾರರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನಿಗೆ ಬಿಟ್ಟಿದ್ದೇನೆ. ಹೀಗಿರಲು ಮಗನೇ, ನಾನು ನಿನಗೇನು ತಾನೆ ಮಾಡಲು ಸಾಧ್ಯ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸಾಕನು ಉತ್ತರವಾಗಿ ಏಸಾವನಿಗೆ, “ಅವನನ್ನು ನಿನಗೆ ದೊರೆಯನನ್ನಾಗಿ ನೇಮಿಸಿದ್ದೇನೆ, ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕರನ್ನಾಗಿ ಕೊಟ್ಟು, ಧಾನ್ಯದಿಂದಲೂ ಹೊಸ ದ್ರಾಕ್ಷಾರಸದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ?” ಎಂದನು.