Genesis 27:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.
Kannada BSI Bible 2016
ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇಟೇ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸಿಕೊಡು; ಸಾವು ಬರುವದಕ್ಕಿಂತ ಮುಂಚೆ ನಾನು ನಿನ್ನನ್ನು ಆಶೀರ್ವದಿಸುತ್ತೇನೆ ಎಂದು ಹೇಳಿದನು.
Kannada Bible (KNCL) BSI 2016
ಅದರಿಂದ ನನಗಿಷ್ಟವಾಗಿರುವ ಸವಿಯೂಟವನ್ನೂ ಅಣಿಮಾಡಿ ಬಡಿಸು. ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಮನಸಾರೆ ಆಶೀರ್ವದಿಸುತ್ತೇನೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಇಷ್ಟಪಡುವ ರುಚಿಯಾದ ಊಟವನ್ನೂ ಸಿದ್ಧಮಾಡಿ ತೆಗೆದುಕೊಂಡು ಬಾ. ಆಗ ಸಾಯುವುದಕ್ಕಿಂತ ಮುಂಚೆ ನಾನು ನಿನ್ನನ್ನು ಆಶೀರ್ವದಿಸುವಂತೆ ಅದನ್ನು ಊಟಮಾಡುವೆನು,” ಎಂದನು.