Genesis 27:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ತಪ್ಪಿಸಿಕೊಳ್ಳುವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.
Kannada BSI Bible 2016
ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ಕೊಸರಿಕೊಳ್ಳುವಾಗ ಅವನು ನಿನ್ನ ಹೆಗಲಿನ ಮೇಲೆ ಹಾಕಿರುವ ನೊಗವನ್ನು ಮುರಿದುಹಾಕುವಿ ಎಂದು ಹೇಳಿದನು.
Kannada Bible (KNCL) BSI 2016
ಬಾಳ ನಡೆಸುವೆ ಕತ್ತಿಕಠಾರಿಯಿಂದಲೇ ಕೂಲಿಯಾಳಾಗುವೆ ಸೋದರನಿಗೆ ಮುರಿಯುವೆ ಅವ ಹೊರಿಸಿದ ನೊಗವ ಸ್ವಾತಂತ್ರ್ಯಕ್ಕಾಗಿ ನೀ ಬಂಡಾಯ ಹೂಡಿದಾಗ,”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”