Genesis 27:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಸಾವನು ಯಾಕೋಬನನ್ನು ಕೊಲ್ಲಬೇಕೆಂದಿರುವುದು ರೆಬೆಕ್ಕಳಿಗೆ ತಿಳಿಯಿತು. ಆಕೆ ಯಾಕೋಬನನ್ನು ಕರೆಸಿ ಅವನಿಗೆ, “ಕೇಳು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ.
Kannada BSI Bible 2016
ರೆಬೆಕ್ಕಳಿಗೆ ತನ್ನ ಹಿರೀ ಮಗನಾದ ಏಸಾವನ ಮಾತುಗಳು ತಿಳಿಸಲ್ಪಟ್ಟಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೇಕಳುಹಿಸಿ ಅವನಿಗೆ--ಇಗೋ, ನಿನ್ನ ಸಹೋದರ ನಾದ ಏಸಾವನು ನಿನ್ನನ್ನು ಕೊಂದು ತನ್ನನ್ನು ಸಂತೈಸಿಕೊಳ್ಳುವದಕ್ಕಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿರೀ ಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೆದು ಅವನಿಗೆ - ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಲ್ಲಬೇಕೆಂದು ಯೋಚಿಸಿ ತನ್ನ ಹೊಟ್ಟೆಯ ಉರಿಯನ್ನು ಆರಿಸಿಕೊಳ್ಳುತ್ತಾನೆ.
Kannada Bible (KNCL) BSI 2016
ತನ್ನ ಹಿರಿಯ ಮಗ ಏಸಾವನ ಅನಿಸಿಕೆಯು ರೆಬೆಕ್ಕಳಿಗೆ ತಿಳಿದು ಬಂದಾಗ ಆಕೆ ತನ್ನ ಕಿರಿಯ ಮಗ ಯಕೋಬನನ್ನು ಕರೆದು ಹೀಗೆಂದಳು: “ನೋಡು, ನಿನ್ನ ಅಣ್ಣ ಏಸಾವನು ನಿನ್ನನ್ನು ಕೊಂದು ಸೇಡು ತೀರಿಸಿಕೊಳ್ಳಬೇಕೆಂದಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಬೆಕ್ಕಳಿಗೆ ತನ್ನ ಹಿರಿಯ ಮಗ ಏಸಾವನ ಬಗ್ಗೆ ಗ್ರಹಿಸಿದಾಗ, ಆಕೆಯು ತನ್ನ ಕಿರಿಯ ಮಗ ಯಾಕೋಬನನ್ನು ಕರೆದು ಅವನಿಗೆ, “ನಿನ್ನ ಸಹೋದರ ಏಸಾವನು ನಿನ್ನನ್ನು ಕೊಂದು, ತನ್ನನ್ನು ಸಂತೈಸಿಕೊಳ್ಳುವುದಕ್ಕಿದ್ದಾನೆ.