Genesis 27:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ವಲ್ಪ ಸಮಯದ ನಂತರ, ನೀನು ಮಾಡಿದ್ದನ್ನು ನಿನ್ನ ಅಣ್ಣನು ಮರೆತುಬಿಡುವನು. ಆಗ ನಿನ್ನನ್ನು ಅಲ್ಲಿಂದ ಕರೆದುಕೊಂಡು ಬರಲು ನಾನು ಒಬ್ಬ ಸೇವಕನನ್ನು ಅಲ್ಲಿಗೆ ಕಳುಹಿಸಿಕೊಡುವೆನು. ಒಂದೇ ದಿನದಲ್ಲಿ, ನನ್ನ ಇಬ್ಬರು ಗಂಡುಮಕ್ಕಳನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದು ಹೇಳಿದಳು.
Kannada BSI Bible 2016
ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನಣ್ಣನು ನೀನು ಮಾಡಿರುವದನ್ನು ಮರೆತು ತನ್ನ ಕೋಪವನ್ನು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರಸುತ್ತೇನೆ. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳಕೊಳ್ಳುವದು ಯಾತಕ್ಕೆ ಎಂದು ಹೇಳಿದಳು.
Kannada Bible (KNCL) BSI 2016
ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು ತನ್ನ ಕೋಪವನ್ನು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಸಿಕೊಳ್ಳುತ್ತೇನೆ. ನಾನೇತಕ್ಕೆ ನಿಮ್ಮಿಬ್ಬರನ್ನೂ ಒಂದೇ ದಿನದಲ್ಲಿ ಕಳೆದುಕೊಳ್ಳಬೇಕು?” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ, ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವವರೆಗೆ ನೀನು ಅಲ್ಲೇ ಇರು. ತರುವಾಯ ನಾನು ನಿನ್ನನ್ನು ಅಲ್ಲಿಂದ ಕರೆಸಿಕೊಳ್ಳುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದಳು.