Genesis 28:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ಪ್ರಯಾಣ ಮಾಡುತ್ತಿರುವಾಗ ಸೂರ್ಯಾಸ್ತವಾಯಿತು. ಆದ್ದರಿಂದ ಯಾಕೋಬನು ಆ ರಾತ್ರಿ ಇಳಿದುಕೊಳ್ಳಲು ಒಂದು ಸ್ಥಳಕ್ಕೆ ಹೋದನು. ಯಾಕೋಬನು ಆ ಸ್ಥಳದಲ್ಲಿ ಒಂದು ಕಲ್ಲನ್ನು ಕಂಡು ಅದರ ಮೇಲೆ ತಲೆಯಿಟ್ಟು ಮಲಗಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
Kannada BSI Bible 2016
ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹೋಗುತ್ತಿರಲು ಒಂದು ಸ್ಥಳಕ್ಕೆ ಸೇರಿದಾಗ ಹೊತ್ತು ಮುಣುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆಗಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
Kannada Bible (KNCL) BSI 2016
ಪ್ರಯಾಣಮಾಡುತ್ತಾ ಅವನು ಒಂದು ಸ್ಥಳಕ್ಕೆ ಬಂದು ಸೇರಿದನು. ಹೊತ್ತು ಮುಳುಗಿದ್ದ ಕಾರಣ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು. ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲೇ ಮಲಗಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಒಂದು ಸ್ಥಳಕ್ಕೆ ಸೇರಿದಾಗ, ಸೂರ್ಯಾಸ್ತಮವಾದದ್ದರಿಂದ ಅಲ್ಲಿ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದು ತಲೆ ದಿಂಬನ್ನಾಗಿ ಇಟ್ಟುಕೊಂಡು, ಆ ಸ್ಥಳದಲ್ಲಿ ಮಲಗಿಕೊಂಡನು.