Genesis 28:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.
Kannada BSI Bible 2016
ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.
Kannada Bible (KNCL) BSI 2016
ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.