Genesis 28:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.
Kannada BSI Bible 2016
ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸಂತತಿಯು ಭೂವಿುಯ ಧೂಳಿನಂತೆ ಅಸಂಖ್ಯವಾಗುವದು; ನೀನು ಪೂರ್ವಪಶ್ಚಿಮದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನ ಮೂಲಕವೂ ನಿನ್ನ ಸಂತತಿಯ ಮೂಲಕವೂ ಭೂವಿುಯ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು.
Kannada Bible (KNCL) BSI 2016
ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.