Genesis 28:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ಖಂಡಿತವಾಗಿಯೂ ಈ ಸ್ಥಳದಲ್ಲಿ ದೇವರಿದ್ದಾನೆ, ಆದರೆ ಅದು ನನಗೆ ಗೊತ್ತಿರಲಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು.
Kannada BSI Bible 2016
ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ನಿದ್ದೆಯಿಂದ ಎಚ್ಚತ್ತು - ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ಇದ್ದಾನೆ;
Kannada Bible (KNCL) BSI 2016
ಯಕೋಬನು ನಿದ್ರೆಯಿಂದ ಎಚ್ಚೆತ್ತನು. \ನಿಶ್ಚಯವಾಗಿ ಸರ್ವೇಶ್ವರ ಈ ಸ್ಥಳದಲ್ಲಿದ್ದಾರೆ; ಇದು ನನಗೆ ತಿಳಿಯದೆಹೋಯಿತು!” ಎಂದುಕೊಂಡನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ನಿಶ್ಚಯವಾಗಿ ಈ ಸ್ಥಳದಲ್ಲಿ ಯೆಹೋವ ದೇವರು ಇದ್ದಾರೆ. ಇದನ್ನು ನಾನು ಅರಿಯಲಿಲ್ಲ,” ಎಂದನು.