Genesis 28:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನಿಗೆ ಭಯವಾಗಿತ್ತು. ಅವನು, “ಇದು ತುಂಬ ಮಹತ್ವವಾದ ಸ್ಥಳ. ಇದು ದೇವರ ಮನೆ. ಇದು ಸ್ವರ್ಗಕ್ಕೆ ಬಾಗಿಲು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.
Kannada BSI Bible 2016
ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ನನಗೆ ತಿಳಿಯದೆ ಹೋಯಿತು ಅಂದುಕೊಂಡು ಭಯಪಟ್ಟವನಾಗಿ - ಈ ಸ್ಥಳವು ಎಷ್ಟೋ ಭಯಂಕರವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದು ಪರಲೋಕದ ಬಾಗಿಲು ಎಂದು ಹೇಳಿದನು.
Kannada Bible (KNCL) BSI 2016
ಅಲ್ಲದೆ ಭಯಭಕ್ತಿಯಿಂದ, “ಇದು ಮಹಾಗಂಭೀರವಾದ ಸ್ಥಳ; ದೇವರ ಸ್ಥಾನವೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು!” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಭಯಪಟ್ಟು, “ಈ ಸ್ಥಳವು ಎಷ್ಟೋ ಗಂಭೀರವಾದದ್ದು, ಇದು ದೇವರ ಮನೆಯೇ ಹೊರತು ಬೇರೆಯಲ್ಲ. ಇದೇ ಪರಲೋಕದ ಬಾಗಿಲು,” ಎಂದನು.