Genesis 28:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ ಯಾಕೋಬನು ಪದ್ದನ್‌ಅರಾಮಿಗೆ ಹೊರಟು ರೆಬೆಕ್ಕಳ ಅಣ್ಣನಾದ ಲಾಬಾನನ ಬಳಿಗೆ ಹೋದನು. ಬೆತೂವೇಲನು ಲಾಬಾನನ ಮತ್ತು ರೆಬೆಕ್ಕಳ ತಂದೆ. ರೆಬೆಕ್ಕಳು ಯಾಕೋಬನ ಮತ್ತು ಏಸಾವನ ತಾಯಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
Kannada BSI Bible 2016
ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಪದ್ದನ್ಅರಾವಿುಗೆ ಹೊರಟು ಅರಾಮ್ಯನಾದ ಬೆತೂವೇಲನ ಮಗನಾಗಿಯೂ ಯಾಕೋಬನಿಗೂ ಏಸಾವನಿಗೂ ತಾಯಿಯಾದ ರೆಬೆಕ್ಕಳ ಅಣ್ಣನಾಗಿಯೂ ಇದ್ದ ಲಾಬಾನನ ಬಳಿಗೆ ಹೋದನು.
Kannada Bible (KNCL) BSI 2016
ಯಕೋಬನು ಮೆಸಪೊಟೇಮಿಯಗೆ ಹೊರಟು, ಅರಾಮ್ಯನಾದ ಬೆತೂವೇಲನ ಮಗನೂ ಮತ್ತು ಯಕೋಬ ಹಾಗು ಏಸಾವನಿಗೆ ತಾಯಿಯಾದ ರೆಬೆಕ್ಕಳಿಗೆ ಅಣ್ಣನೂ ಆಗಿದ್ದ ಲಾಬಾನನ ಬಳಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸಾಕನು ಯಾಕೋಬನನ್ನು ಕಳುಹಿಸಿದಾಗ, ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿ ರೆಬೆಕ್ಕಳ ಸಹೋದರ ಅರಾಮಿನವನಾದ ಬೆತೂಯೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.