Genesis 28:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ತಂದೆಯಾದ ಇಸಾಕನು ಯಾಕೋಬನನ್ನು ಆಶೀರ್ವದಿಸಿದ್ದೂ, ಮದುವೆ ಮಾಡಿಕೊಳ್ಳಲು ಪದ್ದನ್‌ಅರಾಮಿಗೆ ಕಳುಹಿಸಿದ್ದೂ, ಕಾನಾನಿನ ಸ್ತ್ರೀಯನ್ನು ಮದುವೆಯಾಗಕೂಡದೆಂದು ಯಾಕೋಬನಿಗೆ ಆಜ್ಞಾಪಿಸಿರುವುದೂ ಏಸಾವನಿಗೆ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸಾಕನು ಯಾಕೋಬನನ್ನು ಆಶೀರ್ವದಿಸಿ ಪದ್ದನ್ ಅರಾಮಿನಲ್ಲಿ ಹೆಣ್ಣನ್ನು ಹುಡುಕಿ ಮದುವೆ ಮಾಡಿಕೊಳ್ಳಲು ಕಳುಹಿಸಿದ್ದನ್ನೂ, ಅವನು ಯಾಕೋಬನನ್ನು ಆಶೀರ್ವದಿಸುವಾಗ ಅವನಿಗೆ, ನೀನು ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬಾರದೆಂದು ಅಪ್ಪಣೆಕೊಟ್ಟದ್ದನ್ನೂ, ಏಸಾವನು ನೋಡಿದನು.
Kannada BSI Bible 2016
ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸಾಕನು ಯಾಕೋಬನನ್ನು ಆಶೀರ್ವದಿಸಿ ಪದ್ದನ್ಅರಾವಿುನಲ್ಲಿ ಹೆಣ್ಣನ್ನು ತೆಗೆದುಕೊಳ್ಳುವದಕ್ಕೆ ಕಳುಹಿಸಿದ್ದನ್ನೂ ಅವನು ಯಾಕೋಬನನ್ನು ಆಶೀರ್ವದಿಸುವಾಗ ಅವನಿಗೆ - ನೀನು ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬೇಡವೆಂದು ಅಪ್ಪಣೆಕೊಟ್ಟದ್ದನ್ನೂ
Kannada Bible (KNCL) BSI 2016
ಇಸಾಕನು ಯಕೋಬನನ್ನು ಹರಸಿ ಮೆಸಪೊಟೇಮಿಯಾದಲ್ಲಿ ಹೆಣ್ಣನ್ನು ತೆಗೆದುಕೊಳ್ಳುವುದಕ್ಕಾಗಿ ಕಳುಹಿಸಿದ್ದು, ಹರಸುವಾಗ ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬಾರದೆಂದು ಅಪ್ಪಣೆಮಾಡಿದ್ದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸಾಕನು ಯಾಕೋಬನನ್ನು ಆಶೀರ್ವದಿಸಿ, ಅವನಿಗೆ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ, ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ, ಅವನಿಗೆ, “ಕಾನಾನ್ಯರ ಪುತ್ರಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳಬಾರದು,” ಎಂದು ಆಜ್ಞಾಪಿಸಿದ್ದನ್ನೂ, ಏಸಾವನು ತಿಳಿದುಕೊಂಡನು.