Genesis 28:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಸಾವನಿಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದರು. ಆದರೂ ಅವನು ಇಷ್ಮಾಯೇಲನ ಬಳಿಗೆ ಹೋಗಿ ಅವನ ಮಗಳಾದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡನು. ಇಷ್ಮಾಯೇಲನು ಅಬ್ರಹಾಮನ ಮಗನು. ಮಹಲತಳು ನೆಬಾಯೋತನ ತಂಗಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಸಾವನು ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನೂ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತಳನ್ನು ಮದುವೆ ಮಾಡಿಕೊಂಡನು.
Kannada BSI Bible 2016
ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್‌ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನಾದ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ತನ್ನ ಹೆಂಡರಲ್ಲಿ ಸೇರಿಸಿದನು.
Kannada Bible (KNCL) BSI 2016
ತನಗೆ ಈಗಾಗಲೇ ಇದ್ದ ಹೆಂಡತಿಯರ ಜೊತೆಗೆ ಅಬ್ರಹಾಮನ ಮಗನಾದ ಇಷ್ಮಾಯೇಲನ ಬಳಿಗೆ ಹೋಗಿ, ಅವನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಇಷ್ಮಾಯೇಲನ ಬಳಿಗೆ ಹೋಗಿ, ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗ ಇಷ್ಮಾಯೇಲನ ಮಗಳೂ, ನೆಬಾಯೋತನ ತಂಗಿಯೂ ಆಗಿರುವ ಮಹಲತ್ ಎಂಬವಳನ್ನೂ ಮದುವೆಮಾಡಿಕೊಂಡನು.