Genesis 29:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ರಾಹೇಲಳಿಗೆ, ತಾನು ಅವಳ ತಂದೆಯ ಕುಟುಂಬದವನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ರಾಹೇಲಳು ಮನೆಗೆ ಓಡಿಹೋಗಿ ತನ್ನ ತಂದೆಗೆ ಈ ಸುದ್ದಿಯನ್ನು ತಿಳಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನಿನ್ನ ತಂದೆಯ ಸೋದರಳಿಯನೂ ರೆಬೆಕ್ಕಳ ಮಗನಾದ ಯಾಕೋಬನೆಂದು ತಿಳಿಸಿದನು” ಆಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು.
Kannada BSI Bible 2016
ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನ ತಂದೆಗೆ ಸೋದರಳಿಯನೂ ರೆಬೆಕ್ಕಳ ಮಗನೂ ಆಗಿದ್ದೇನೆ ಎಂದು ಹೇಳಿದಾಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು.
Kannada Bible (KNCL) BSI 2016
ತಾನು ಆಕೆಯ ತಂದೆಗೆ ಸೋದರಳಿಯ, ರೆಬೆಕ್ಕಳ ಮಗ ಎಂದು ತಿಳಿಸಿದನು. ರಾಖೇಲಳು ಕೂಡಲೆ ಓಡಿಹೋಗಿ ತನ್ನ ತಂದೆಗೆ ಸಮಾಚಾರ ಮುಟ್ಟಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ರಾಹೇಲಳಿಗೆ, ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.