Genesis 29:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.
Kannada BSI Bible 2016
ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲಾಬಾನನು ತನ್ನ ಸೋದರಳಿಯನು ಬಂದ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರಕೊಂಡು ಬಂದನು. ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು
Kannada Bible (KNCL) BSI 2016
ಲಾಬಾನನು ತನ್ನ ಸೋದರಳಿಯ ಬಂದ ಸುದ್ದಿಯನ್ನು ಕೇಳಿ ಅವನನ್ನು ಎದುರುಗೊಳ್ಳಲು ಓಡಿಬಂದನು. ಯಕೋಬನನ್ನು ಅಪ್ಪಿಕೊಂಡು ಮುದ್ದಿಟ್ಟು, ಮನೆಗೆ ಕರೆದುಕೊಂಡು ಹೋದನು. ನಡೆದ ಸಂಗತಿಗಳನ್ನೆಲ್ಲ ಯಕೋಬನು ಲಾಬಾನನಿಗೆ ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.