Genesis 29:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಲಾಬಾನನು, “ಇದು ಆಶ್ಚರ್ಯವಾಗಿದೆ; ನೀನು ನನ್ನ ಸ್ವಂತ ಕುಟುಂಬದವನು” ಎಂದು ಹೇಳಿದನು. ಆದ್ದರಿಂದ ಯಾಕೋಬನು ಲಾಬಾನನೊಡನೆ ಒಂದು ತಿಂಗಳವರೆಗೆ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, “ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ” ಎಂದು ಹೇಳಿದನು.
Kannada BSI Bible 2016
ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲಾಬಾನನು ಅವನಿಗೆ - ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದೀ ಎಂದು ಹೇಳಿದನು. ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು.
Kannada Bible (KNCL) BSI 2016
ಲಾಬಾನನು, “ನಿಜವಾಗಿಯೂ ನೀನು ನನ್ನ ರಕ್ತಸಂಬಂಧಿ,” ಎಂದನು. ಅವನೊಂದಿಗೆ ಯಕೋಬನು ಒಂದು ತಿಂಗಳವರೆಗೂ ವಾಸಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಲಾಬಾನನು ಅವನಿಗೆ, “ನಿಶ್ಚಯವಾಗಿ ನೀನು ನನ್ನ ರಕ್ತಸಂಬಂಧಿಯಾಗಿದ್ದೀ,” ಎಂದನು. ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.