Genesis 29:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ದಿನ ಲಾಬಾನನು ಯಾಕೋಬನಿಗೆ, “ನೀನು ಸಂಬಳ ತೆಗೆದುಕೊಳ್ಳದೆ ನನ್ನ ಬಳಿಯಲ್ಲಿ ಕೆಲಸ ಮಾಡುವುದು ಸರಿಯಲ್ಲ. ನೀನು ನನ್ನ ಸಂಬಂಧಿಕನೇ ಹೊರತು ಸೇವಕನಲ್ಲ. ನಾನು ನಿನಗೆ ಎಷ್ಟು ಸಂಬಳ ಕೊಡಲಿ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಯೆಂದು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?” ಎಂದು ಕೇಳಿದನು.
Kannada BSI Bible 2016
ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಲಾಬಾನನು ಅವನನ್ನು - ನೀನು ನನ್ನನ್ನು ಸಂಬಂಧಿಯೆಂದು ಸುಮ್ಮನೆ ಸೇವಿಸುವದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ ಎಂದು ಕೇಳಿದನು.
Kannada Bible (KNCL) BSI 2016
ಆ ಬಳಿಕ ಲಾಬಾನನು ಯಕೋಬನಿಗೆ, “ನೀನು ನನ್ನ ಸಂಬಂಧಿಯೆಂದ ಮಾತ್ರಕ್ಕೆ ಬಿಟ್ಟಿ ಸೇವೆ ಮಾಡಿಸಿಕೊಳ್ಳುವುದು ಸರಿಯಲ್ಲ; ನಿನ್ನ ಕೆಲಸಕ್ಕೆ ಏನು ಸಂಬಳ ಕೊಡಲಿ, ಹೇಳು?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಕನಾಗಿರುವುದರಿಂದ ಸುಮ್ಮನೆ ನನಗೆ ಸೇವೆ ಮಾಡಬೇಕೆ? ನಿನ್ನ ಸಂಬಳ ಎಷ್ಟೆಂಬುದನ್ನು ನನಗೆ ಹೇಳು?” ಎಂದನು.