Genesis 29:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ದೃಷ್ಟಿಸಿ ನೋಡಿದಾಗ, ಹೊಲದಲ್ಲಿ ಅವನಿಗೆ ಒಂದು ಬಾವಿ ಕಾಣಿಸಿತು. ಬಾವಿಯ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿಕೊಂಡಿದ್ದವು. ಕುರಿಗಳಿಗೆ ಆ ಬಾವಿಯ ನೀರನ್ನೇ ಕುಡಿಸುತ್ತಿದ್ದರು. ಬಾವಿಯ ಮೇಲೆ ಅಗಲವಾದ ದೊಡ್ಡ ಕಲ್ಲನ್ನು ಮುಚ್ಚಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು.
Kannada BSI Bible 2016
ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಗೆ ಬಂದಾಗ ಅಡವಿಯೊಳಗೆ ಬಾವಿಯನ್ನು ಕಂಡನು. ಬಾವಿಯ ಹತ್ತರ ಮೂರು ಕುರಿಹಿಂಡುಗಳು ಮಲಗಿದ್ದವು. ಕುರಿಗಳನ್ನು ನೀರು ಕುಡಿಸುವದಕ್ಕಾಗಿ ಆ ಬಾವಿಗೆ ಹೊಡಕೊಂಡು ಹೋಗುವ ಪದ್ಧತಿಯಿತ್ತು. ಬಾವಿಯ ಮೇಲೆ ಮುಚ್ಚಿದ್ದ ಕಲ್ಲು ದೊಡ್ಡದಾಗಿತ್ತು.
Kannada Bible (KNCL) BSI 2016
ಕೂಡಲೆ ಅವನಿಗೆ ಆ ಅಡವಿಯಲ್ಲಿ ಬಾವಿಯೊಂದು ಕಾಣಿಸಿತು. ಅದರ ಬಳಿ ಮೂರು ಕುರಿಹಿಂಡು ಮಲಗಿದ್ದವು. ಕುರಿಗಳನ್ನು ನೀರು ಕುಡಿಸುವುದಕ್ಕಾಗಿ ಆ ಬಾವಿಗೆ ಹೊಡೆದುಕೊಂಡು ಬರುವುದು ವಾಡಿಕೆ. ಬಾವಿಯ ಮೇಲೆ ಮುಚ್ಚಿದ್ದ ಕಲ್ಲು ದೊಡ್ಡದಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕಣ್ಣೆತ್ತಿ ನೋಡಲಾಗಿ, ಹೊಲದಲ್ಲಿ ಒಂದು ಬಾವಿ ಇತ್ತು. ಅದರ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿದ್ದವು. ಏಕೆಂದರೆ ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲು ಇತ್ತು.