Genesis 29:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯಾಕೋಬನು ಅವನೊಂದಿಗೆ ಇದ್ದುಕೊಂಡು ಏಳು ವರ್ಷಗಳವರೆಗೆ ಲಾಬಾನನ ಸೇವೆ ಮಾಡಿದನು. ಆದರೆ ಅವನು ರಾಹೇಲಳನ್ನು ತುಂಬಾ ಪ್ರೀತಿಸುತ್ತಿದ್ದುದರಿಂದ ಆ ಸಮಯವು ಅವನಿಗೆ ತುಂಬಾ ಕಡಿಮೆಯಂತೆ ಕಾಣಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.
Kannada BSI Bible 2016
ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಯಾಕೋಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು; ಆದರೂ ಆಕೆಯಲ್ಲಿ ಬಹಳ ಪ್ರೀತಿಯನ್ನಿಟ್ಟಿದ್ದದರಿಂದ ಅದು ಅವನಿಗೆ ಸ್ವಲ್ಪ ದಿವಸದಂತೆ ಕಾಣಿಸಿತು.
Kannada Bible (KNCL) BSI 2016
ಅಂತೆಯೇ ಯಕೋಬನು ರಾಖೇಲಳಿಗಾಗಿ ಏಳು ‌ವರ್ಷ‌ಕಾಲ ಸೇವೆಮಾಡಿದನು. ಆಕೆಯ ಮೇಲೆ ಅವನಿಗೆ ಬಹಳ ಪ್ರೀತಿಯಿದ್ದುದರಿಂದ ಅದು ಅವನಿಗೆ ಕೇವಲ ಕೆಲವೇ ದಿನಗಳಂತೆ ಕಾಣಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರ್ಷಗಳು ಅವನಿಗೆ ಸ್ವಲ್ಪದಿನಗಳಾಗಿ ತೋರಿದವು.