Genesis 29:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಳು ವರ್ಷಗಳಾದ ಮೇಲೆ ಯಾಕೋಬನು ಲಾಬಾನನಿಗೆ, “ನನಗೆ ರಾಹೇಲಳನ್ನು ಮದುವೆ ಮಾಡಿಕೊಡು. ನನ್ನ ಸೇವೆಯ ಕಾಲ ಮುಗಿದುಹೋಯಿತು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು.
Kannada BSI Bible 2016
ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯಾಕೋಬನು ಲಾಬಾನನಿಗೆ - ಗೊತ್ತುಮಾಡಿದ ಕಾಲವು ಮುಗಿದು ಹೋಯಿತು; ಆಕೆಯನ್ನು ನನ್ನ ಹೆಂಡತಿಯಾಗುವಂತೆ ನನ್ನ ಸ್ವಾಧೀನಕ್ಕೆ ಕೊಡು ಎಂದು ಹೇಳಿದನು.
Kannada Bible (KNCL) BSI 2016
ತರುವಾಯ ಯಕೋಬನು ಲಾಬಾನನಿಗೆ, “ನನ್ನ ಸೇವಾವಧಿ ಮುಗಿಯಿತು. ಆಕೆ ನನ್ನ ಹೆಂಡತಿಯಾಗುವಂತೆ ನನ್ನ ಸ್ವಾಧೀನಕ್ಕೆ ಕೊಡಿ,” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯಾಕೋಬನು ಲಾಬಾನನಿಗೆ, “ನನ್ನ ಸೇವಾ ದಿನಗಳು ಪೂರ್ತಿಯಾದವು. ನಾನು ನನ್ನ ಹೆಂಡತಿಯೊಂದಿಗೆ ಬಾಳುವಂತೆ ಆಕೆಯನ್ನು ನನಗೆ ಕೊಡು,” ಎಂದನು.