Genesis 29:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲಾಬಾನನು, “ನಮ್ಮ ದೇಶದಲ್ಲಿ ದೊಡ್ಡ ಮಗಳು ಮದುವೆಯಾಗದ ಹೊರತು ಚಿಕ್ಕಮಗಳಿಗೆ ಮದುವೆ ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲಾಬಾನನು, “ಹಿರಿ ಮಗಳಿಗಿಂತ ಮೊದಲು ಕಿರಿಯ ಮಗಳನ್ನು ಮದುವೆ ಮಾಡಿಸಿಕೊಡುವುದು ನಮ್ಮ ದೇಶದ ಪದ್ಧತಿಯಲ್ಲ.
Kannada BSI Bible 2016
ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲಾಬಾನನಿಗೆ - ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸಮಾಡಿದಿ ಎಂದು ಕೇಳಿದ್ದಕ್ಕೆ ಲಾಬಾನನು - ಹಿರೀಮಗಳಿಗಿಂತ ಮೊದಲು ಕಿರೀ ಮಗಳನ್ನು ಮದುವೆಮಾಡಿಸಿಕೊಡುವದು ನಮ್ಮ ದೇಶದ ಪದ್ಧತಿಯಲ್ಲ.
Kannada Bible (KNCL) BSI 2016
ಅದಕ್ಕೆ ಲಾಬಾನನು, “ಹಿರಿಯ ಮಗಳನ್ನು ಇರಿಸಿಕೊಂಡು ಕಿರಿಯ ಮಗಳನ್ನು ಮದುವೆಮಾಡಿಕೊಡುವುದು ನಮ್ಮ ನಾಡಿನ ಪದ್ಧತಿಯಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಲಾಬಾನನು, “ಹಿರಿಯಳಿಗಿಂತ ಮೊದಲು ಕಿರಿಯಳನ್ನು ಮದುವೆ ಮಾಡಿಕೊಡುವುದು ನಮ್ಮ ಪದ್ಧತಿಯಲ್ಲ.