Genesis 29:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆಕೆಯ ಮದುವೆಯ ವಾರವನ್ನು ಮುಂದುವರಿಸು. ನಾನು ನಿನಗೆ ರಾಹೇಲಳನ್ನು ಸಹ ಮದುವೆ ಮಾಡಿಕೊಡುತ್ತೇನೆ. ಆದರೆ ನೀನು ನನಗೆ ಇನ್ನೂ ಏಳು ವರ್ಷ ಸೇವೆ ಮಾಡಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು.
Kannada BSI Bible 2016
ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯ [ಮದುವೆಯ] ವಾರವನ್ನು ಪೂರೈಸು; ಅನಂತರ ಈ ನನ್ನ ಕಿರೀ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರುಷ ಸೇವೆಮಾಡು ಅಂದನು.
Kannada Bible (KNCL) BSI 2016
ಹಿರಿಯಳೊಡನೆ ಮದುವೆಯ ವಾರವನ್ನು ಕಳೆದುಬಿಡು; ಅನಂತರ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ. ಅವಳಿಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡುವೆಯಂತೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿರಿಯಳೊಡನೆ ಈ ವಾರವನ್ನು ಪೂರೈಸು. ತರುವಾಯ ನೀನು ಇನ್ನು ಬೇರೆ ಏಳು ವರ್ಷಗಳವರೆಗೆ ಸೇವೆ ಮಾಡಲು ಒಪ್ಪಿಕೊಂಡರೆ, ನಾನು ಕಿರಿಯ ಮಗಳನ್ನು ನಿನಗೆ ಕೊಡುತ್ತೇನೆ,” ಎಂದನು.