Genesis 29:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ರಾಹೇಲಳನ್ನೂ ಕೂಡಿದನು. ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿ ಆಕೆಗೋಸ್ಕರ ಇನ್ನೂ ಏಳು ವರ್ಷ ಸೇವೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು.
Kannada BSI Bible 2016
ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ರಾಹೇಲಳನ್ನೂ ಕೂಡಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳುವರುಷ ಸೇವೆ ಮಾಡಿದನು.
Kannada Bible (KNCL) BSI 2016
ಯಕೋಬನು ರಾಖೇಲಳನ್ನು ಕೂಡಿದನು. ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿ ಇನ್ನೂ ಏಳು ವರ್ಷ ಸೇವೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ರಾಹೇಲಳೊಂದಿಗೆ ಕೂಡಿ, ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಸಿದನು. ಇನ್ನೂ ಏಳು ವರ್ಷ ಲಾಬಾನನ ಬಳಿಯಲ್ಲಿ ಸೇವೆ ಮಾಡಿದನು.