Genesis 29:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸುವುದನ್ನು ಯೆಹೋವನು ನೋಡಿದನು. ಆದ್ದರಿಂದ ಯೆಹೋವನು ಲೇಯಳಿಗೆ ಮಕ್ಕಳಾಗುವಂತೆ ಮಾಡಿದನು. ಆದರೆ ರಾಹೇಲಳಿಗೆ ಮಕ್ಕಳಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.
Kannada BSI Bible 2016
ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇಯಳು ಯಾಕೋಬನಿಗೆ ಅಲಕ್ಷ್ಯವಾದಳೆಂದು ಯೆಹೋವನು ನೋಡಿ ಆಕೆಯನ್ನು ಬಸುರಾಗುವಂತೆ ಮಾಡಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.
Kannada Bible (KNCL) BSI 2016
ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.