Genesis 29:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ಖಂಡಿತವಾಗಿಯೂ ನನ್ನ ಗಂಡ ನನ್ನ ಜೊತೆಗೂಡಿರುವನು. ನಾನು ಅವನಿಗೆ ಮೂರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು.
Kannada BSI Bible 2016
ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ತಿರಿಗಿ ಗರ್ಭಧರಿಸಿ ಗಂಡುಮಗುವನ್ನು ಹೆತ್ತು - ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು; ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ ಎಂದು ಹೇಳಿ ಅದಕ್ಕೆ ಲೇವಿಯೆಂದು ಹೆಸರಿಟ್ಟಳು.
Kannada Bible (KNCL) BSI 2016
ಮತ್ತೊಮ್ಮೆ ಗರ್ಭಧರಿಸಿ ಗಂಡು ಮಗುವನ್ನೇ ಹೆತ್ತಳು. “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುತ್ತೇವೆ. ಅವರಿಗೆ ಮೂರು ಮಂದಿ ಗಂಡುಮಕ್ಕಳನ್ನು ಹೆತ್ತಿದ್ದೇನಲ್ಲವೆ,” ಎಂದುಕೊಂಡು ಆ ಮಗುವಿಗೆ ‘ಲೇವಿ’ ಎಂದು ಹೆಸರಿಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತೊಮ್ಮೆ ಲೇಯಳು ಮಗನನ್ನು ಹೆತ್ತು, “ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಏಕೆಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ,” ಎಂದು ಹೇಳಿ, ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.