Genesis 29:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಲೇಯಾ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಲೇಯಳು ತನ್ನೊಳಗೆ, “ಈಗ ನಾನು ಯೆಹೋವನನ್ನು ಸ್ತುತಿಸುವೆನು” ಎಂದು ಹೇಳಿ ಆ ಮಗುವಿಗೆ ಯೆಹೂದ ಎಂದು ಹೆಸರಿಟ್ಟಳು. ನಂತರ ಲೇಯಳಿಗೆ ಮಕ್ಕಳಾಗುವುದು ನಿಂತುಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು.
Kannada BSI Bible 2016
ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ತಿರಿಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು - ಈಗ ಯೆಹೋವನಿಗೆ ಉಪಕಾರಸ್ತುತಿ ಮಾಡುವೆನು ಎಂದು ಹೇಳಿ ಅದಕ್ಕೆ ಯೆಹೂದಾ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಗರ್ಭಧಾರಣೆಯಾಗುವದು ತಡವಾಯಿತು.
Kannada Bible (KNCL) BSI 2016
ಮಗದೊಮ್ಮೆ ಗರ್ಭಧರಿಸಿ ಈ ಸಾರಿಯೂ ಗಂಡು ಮಗುವನ್ನೇ ಹೆತ್ತಳು. \ಈಗ ಸರ್ವೇಶ್ವರಸ್ವಾಮಿಯ ಸ್ತುತಿಮಾಡುತ್ತೇನೆ,“ ಎಂದು ಹೇಳಿ ಆ ಮಗುವಿಗೆ “ಯೆಹೂದ\ ಎಂದು ನಾಮಕರಣ ಮಾಡಿದಳು. ಆ ಮೇಲೆ ಆಕೆಗೆ ಗರ್ಭಧಾರಣೆ ಆಗುವುದು ನಿಂತುಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ಈಗ ನಾನು ಯೆಹೋವ ದೇವರನ್ನು ಸ್ತುತಿಸುವೆನು,” ಎಂದು ಹೇಳಿ, ಅವನಿಗೆ ಯೆಹೂದ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಮಕ್ಕಳಾಗಲಿಲ್ಲ.
Recommended Reading