Genesis 29:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು, “ನೋಡಿ, ಇನ್ನೂ ಹೊತ್ತಾಗಿಲ್ಲ; ರಾತ್ರಿಗಾಗಿ ಕುರಿಗಳನ್ನು ಒಟ್ಟಿಗೆ ಸೇರಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಅವರಿಗೆ, “ಇನ್ನೂ ಹೊತ್ತು ಬಹಳ ಇದೆ, ಮಂದೆಗಳಿಗೆ ನೀರನ್ನು ಕುಡಿಸಿ ಪುನಃ ಮೇಯಿಸಿಕೊಂಡು ಬನ್ನಿರಿ ಅನ್ನಲು ಅವರು,
Kannada BSI Bible 2016
ಅವನು ಅವರಿಗೆ--ಇಗೋ, ಇನ್ನೂ ಹೊತ್ತು ಬಹಳವಿದೆ; ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ; ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು - ಇನ್ನೂ ಬಹಳ ಹೊತ್ತು ಇದೆ; ಕುರಿಗಳನ್ನು ಕೂಡಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ ಅನ್ನಲು
Kannada Bible (KNCL) BSI 2016
ಯಕೋಬನು, “ಇನ್ನೂ ಬಹಳ ಹೊತ್ತು ಇದೆ; ಕುರಿಗಳನ್ನು ಒಟ್ಟುಗೂಡಿಸುವ ಸಮಯ ಆಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಬಾರದೇಕೆ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಅವರಿಗೆ, “ಇನ್ನೂ ಬಹಳ ಹೊತ್ತು ಇದೆ. ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ. ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ,” ಎಂದನು.