Genesis 29:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ಕುರುಬರೊಡನೆ ಮಾತಾಡುತ್ತಿರುವಾಗ ರಾಹೇಲಳು ತನ್ನ ತಂದೆಯ ಕುರಿಗಳೊಡನೆ ಬಂದಳು. (ಕುರಿಗಳನ್ನು ನೋಡಿಕೊಳ್ಳುವುದು ರಾಹೇಲಳ ಕೆಲಸವಾಗಿತ್ತು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು.
Kannada BSI Bible 2016
ಯಾಕೋಬನು ಇನ್ನೂ ಅವರ ಸಂಗಡ ಮಾತನಾಡು ತ್ತಿದ್ದಾಗ ಕುರಿಗಳನ್ನು ಮೇಯಿಸುವವಳಾಗಿದ್ದ ರಾಹೇ ಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವರೊಂದಿಗೆ ಮಾತಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳನ್ನು ಹೊಡಕೊಂಡು ಬಂದಳು; ಆಕೆಯೇ ಅವುಗಳನ್ನು ಮೇಯಿಸುವವಳಾಗಿದ್ದಳು.
Kannada Bible (KNCL) BSI 2016
ಯಕೋಬನು ಅವರೊಂದಿಗೆ ಮಾತಾಡುತ್ತ ಇರುವಾಗಲೆ ಕುರಿಗಾಹಿ ರಾಖೇಲಳು ತನ್ನ ತಂದೆಯ ಕುರಿಗಳನ್ನು ಹೊಡೆದುಕೊಂಡು ಅಲ್ಲಿಗೆ ಬಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಇನ್ನೂ ಅವರ ಸಂಗಡ ಮಾತನಾಡುತ್ತಿದ್ದಾಗ, ಕುರಿಗಳನ್ನು ಮೇಯಿಸುವ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.