Genesis 3:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರಾದ ಯೆಹೋವನು ಸೃಷ್ಟಿಸಿದ ಪ್ರಾಣಿಗಳಲ್ಲೆಲ್ಲಾ ಹಾವು ಅತಿ ಬುದ್ಧಿವಂತವಾದ ಮತ್ತು ಕುತಂತ್ರವುಳ್ಳ ಜಂತುವಾಗಿತ್ತು. ಹಾವು ಸ್ತ್ರೀಯನ್ನು ಮೋಸಗೊಳಿಸಬೇಕೆಂದಿತ್ತು. ಹಾವು ಅವಳಿಗೆ, “ಅಮ್ಮಾ, ಈ ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಕೂಡದೆಂದು ದೇವರು ನಿಮಗೆ ಹೇಳಿರುವುದು ನಿಜವೇ?” ಎಂದು ಕೇಳಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
Kannada BSI Bible 2016
ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವದೇವರು ಉಂಟುಮಾಡಿದ ಎಲ್ಲಾ ಭೂಜಂತುಗಳಲ್ಲಿ ಸರ್ಪವು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಯ ಬಳಿಗೆ ಬಂದು - ಏನವ್ವಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಬಾರದೆಂದು ದೇವರು ಅಪ್ಪಣೆಕೊಟ್ಟಿರುವದು ನಿಜವೋ ಎಂದು ಕೇಳಲು ಸ್ತ್ರೀಯು -
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿ ಯುಕ್ತಿ ಉಳ್ಳದ್ದು ಸರ್ಪ. ಅದು ಮಹಿಳೆಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ?” ಎಂದು ಕೇಳಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಸೃಷ್ಟಿಸಿದ ಅಡವಿಯ ಎಲ್ಲಾ ಕಾಡುಮೃಗಗಳಿಗಿಂತ ಸರ್ಪವು ಬಹು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಗೆ, “ನೀವು ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ?” ಎಂದು ಕೇಳಿತು.