Genesis 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
Kannada BSI Bible 2016
ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಎಲ್ಲಿರುತ್ತಿ ಎಂದು ಕೂಗಿ ಕೇಳಲು ಅವನು - ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅಡಗಿಕೊಂಡೆನು ಅಂದನು.
Kannada Bible (KNCL) BSI 2016
ಅದಕ್ಕೆ ಅವನು, “ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವನು, “ನಿನ್ನ ಶಬ್ದವನ್ನು ನಾನು ತೋಟದಲ್ಲಿ ಕೇಳಿದೆ. ನಾನು ಬೆತ್ತಲೆಯಾಗಿರುವುದರಿಂದ ಭಯಪಟ್ಟು ಅಡಗಿಕೊಂಡೆನು,” ಎಂದನು.