Genesis 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
Kannada BSI Bible 2016
ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕಾತನು - ನೀನು ಬೆತ್ತಲೆಯಾಗಿದ್ದಿ ಎಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿಯಾ ಎಂದು ಕೇಳಲು
Kannada Bible (KNCL) BSI 2016
“ನೀನು ಬೆತ್ತಲೆಯಾಗಿರುತ್ತಿಯೆಂದು ನಿನಗೆ ತಿಳಿಸಿದವರು ಯಾರು?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ದೇವರು, “ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದೀಯೋ?” ಎಂದು ಕೇಳಿದರು.