Genesis 3:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದೇವರಾದ ಯೆಹೋವನು ಸ್ತ್ರೀಗೆ, “ನೀನು ಮಾಡಿದ್ದೇನು?” ಎಂದು ಕೇಳಿದನು. ಅದಕ್ಕೆ ಸ್ತ್ರೀಯು, “ಆ ಹಾವಿನ ಮೋಸಕ್ಕೆ ಒಳಗಾಗಿ ನಾನು ಆ ಹಣ್ಣನ್ನು ತಿಂದೆ” ಅಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
Kannada BSI Bible 2016
ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವದೇವರು ಸ್ತ್ರೀಯನ್ನು - ಇದೇನು ನೀನು ಮಾಡಿದ್ದು ಎಂದು ಕೇಳಲು ಸ್ತ್ರೀಯು - ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು ಎಂದು ಉತ್ತರ ಕೊಟ್ಟಳು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.