Genesis 3:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
Kannada BSI Bible 2016
ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಪುರುಷನಿಗೆ - ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನೀನು ಹೆಂಡತಿಯ ಮಾತು ಕೇಳಿ ತಿಂದಕಾರಣ ನಿನ್ನ ನಿವಿುತ್ತ ಭೂವಿುಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ದುಡಿದು ದುಡಿದು ಭೂವಿುಯ ಹುಟ್ಟುವಳಿಯನ್ನು ತಿನ್ನಬೇಕು.
Kannada Bible (KNCL) BSI 2016
ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ.