Genesis 3:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದಾಮನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದಾಮನು ಹವ್ವ ಎಂದು ಹೆಸರಿಡಲು ಕಾರಣವೇನೆಂದರೆ ಈ ಲೋಕದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಆಕೆಯೇ ಮೂಲ ತಾಯಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
Kannada BSI Bible 2016
ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು; ಯಾಕಂದರೆ ಬದುಕುವವರೆಲ್ಲರಿಗೂ ಅವಳೇ ಮೂಲಮಾತೆ.
Kannada Bible (KNCL) BSI 2016
ಆದಾಮನು ತನ್ನ ಹೆಂಡತಿಗೆ “ಹವ್ವ\ ಎಂದು ಹೆಸರಿಟ್ಟನು. ಏಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಏಕೆಂದರೆ ಆಕೆಯೇ ಬದುಕಿದವರಿಗೆಲ್ಲಾ ತಾಯಿಯಾಗಿದ್ದಾಳೆ.