Genesis 30:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೋಧಿಯ ಸುಗ್ಗಿಕಾಲದಲ್ಲಿ, ರೂಬೇನನು ಹೊಲಕ್ಕೆ ಹೋಗಿದ್ದಾಗ ಕಾಮಜನಕಗಿಡದ ಹೂವುಗಳನ್ನು ಕಂಡನು. ರೂಬೇನನು ಈ ಹೂವುಗಳನ್ನು ತನ್ನ ತಾಯಿಯಾದ ಲೇಯಳಿಗೆ ತಂದುಕೊಟ್ಟನು. ರಾಹೇಲಳು ಲೇಯಳಿಗೆ, “ದಯವಿಟ್ಟು, ನಿನ್ನ ಮಗನು ತಂದಿರುವ ಹೂವುಗಳಲ್ಲಿ ನನಗೆ ಸ್ವಲ್ಪಕೊಡು” ಎಂದು ಕೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋದಿ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ ಕಾಮಜನಕ ಹಣ್ಣುಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ, “ನಿನ್ನ ಮಗನು ತಂದಿರುವ ಕಾಮಜನಕ ಹಣ್ಣುಗಳಲ್ಲಿ ಕೆಲವನ್ನು ನನಗೆ ಕೊಡು” ಎಂದು ಕೇಳಿಕೊಂಡಳು.
Kannada BSI Bible 2016
ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋದೀ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ ಕಾಮಜನಕ ಫಲಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ - ನಿನ್ನ ಮಗನು ತಂದಿರುವ ಕಾಮಜನಕ ಫಲಗಳಲ್ಲಿ ಕೆಲವನ್ನು ನನಗೆ ಕೊಡಮ್ಮಾ ಎಂದು ಕೇಳಿಕೊಂಡಳು.
Kannada Bible (KNCL) BSI 2016
ಗೋದಿಯ ಸುಗ್ಗಿ ಕಾಲದಲ್ಲಿ ರೂಬೇನನು ಹೊಲದ ಕಡೆ ಹೊಗುತ್ತಿದ್ದಾಗ ಕಾಮೋದ್ದೀಪಕ ಹಣ್ಣುಗಳನ್ನು ಕಂಡನು. ಅವನ್ನು ತಂದು ತನ್ನ ತಾಯಿ ಲೇಯಳಿಗೆ ಕೊಟ್ಟನು. ರಾಖೇಲಳು ಆಕೆಗೆ, “ನಿನ್ನ ಮಗ ತಂದಿರುವ ಕಾಮೋದ್ದೀಪಕ ಫಲಗಳಲ್ಲಿ ಕೆಲವನ್ನು ನನಗೆ ಕೊಡಕ್ಕಾ,” ಎಂದು ಕೇಳಿಕೊಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೂಬೇನನು ಗೋಧಿ ಕೊಯ್ಯುವ ಕಾಲದಲ್ಲಿ ಹೋಗಿ, ಹೊಲದಲ್ಲಿ ದುದಾಯಿ ಫಲಗಳನ್ನು ಕಂಡು, ತಾಯಿ ಲೇಯಳ ಬಳಿಗೆ ಕೆಲವು ಫಲಗಳನ್ನು ತಂದಾಗ, ರಾಹೇಲಳು ಲೇಯಳಿಗೆ, “ನಿನ್ನ ಮಗನು ತಂದ ಫಲಗಳಲ್ಲಿ ಕೆಲವನ್ನು ನನಗೆ ಕೊಡು,” ಎಂದಳು.