Genesis 30:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೇಯಳು, “ದೇವರು ನನಗೆ ಒಂದು ಬಹುಮಾನವನ್ನು ಕೊಟ್ಟನು; ಯಾಕೆಂದರೆ ನಾನು ನನ್ನ ಸೇವಕಿಯನ್ನು ನನ್ನ ಗಂಡನಿಗೆ ಕೊಟ್ಟೆನು” ಎಂದು ಹೇಳಿ, ಆ ಮಗುವಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ ಇಸ್ಸಾಕಾರ್” ಎಂದು ಹೆಸರಿಟ್ಟಳು.
Kannada BSI Bible 2016
ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆಂದು ಹೇಳಿ ಅದಕ್ಕೆ ಇಸ್ಸಾಕಾರೆಂದು ಹೆಸರಿಟ್ಟಳು.
Kannada Bible (KNCL) BSI 2016
“ನಾನು ನನ್ನ ದಾಸಿಯನ್ನು ಗಂಡನಿಗೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ಆಕೆ ಆ ಮಗುವಿಗೆ ‘ಇಸ್ಸಾಕಾರ್’ ಎಂದು ಹೆಸರಿಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇಯಳು, “ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ, ಅವನಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.