Genesis 30:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇಯಳು, “ದೇವರು ನನಗೆ ಒಂದು ಒಳ್ಳೆಯ ಬಹುಮಾನವನ್ನು ಕೊಟ್ಟಿದ್ದಾನೆ. ಈಗ ಖಂಡಿತವಾಗಿ ಯಾಕೋಬನು ನನ್ನನ್ನು ಸ್ವೀಕರಿಸುವನು, ಯಾಕೆಂದರೆ ನಾನು ಅವನಿಗೆ ಆರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ, ಜೆಬುಲೂನ್ ಎಂದು ಹೆಸರಿಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು” ಎಂದು ಹೇಳಿ ಅದಕ್ಕೆ “ ಜೆಬುಲೂನ್” ಎಂದು ಹೆಸರಿಟ್ಟಳು.
Kannada BSI Bible 2016
ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್‌ ಎಂದು ಹೆಸರಿಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು - ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ನಾನು ನನ್ನ ಗಂಡನಿಗೆ ಆರು ಮಂದಿ ಗಂಡುಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು ಎಂದು ಹೇಳಿ ಅದಕ್ಕೆ ಜೆಬುಲೂನ್ ಎಂದು ಹೆಸರಿಟ್ಟಳು.
Kannada Bible (KNCL) BSI 2016
“ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನೆ. ಆದುದರಿಂದ ಅವರು ನನ್ನೊಡನೆಯೇ ವಾಸಿಸುವರು,” ಎಂದು ಹೆಳಿಕೊಂಡು ಆ ಮಗುವಿಗೆ ‘ಜೆಬುಲೂನ್’ ಎಂದು ಹೆಸರಿಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ, ನನ್ನ ಗಂಡನು ಈಗಲಾದರೂ ನನ್ನನ್ನು ಗೌರವಿಸುವನು,” ಎಂದು ಹೇಳಿ, ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.