Genesis 30:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಹೆಂಡತಿಯರನ್ನೂ ಮಕ್ಕಳನ್ನೂ ನನಗೆ ಕೊಡು. ನಾನು ಹದಿನಾಲ್ಕು ವರ್ಷ ನಿನ್ನ ಸೇವೆಮಾಡಿ ಅವರನ್ನು ಸಂಪಾದಿಸಿಕೊಂಡಿದ್ದೇನೆ. ನಾನು ನಿನಗೆ ಒಳ್ಳೆಯ ಸೇವೆ ಮಾಡಿರುವುದು ನಿನಗೆ ತಿಳಿದಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಸೇವೆಮಾಡಿ ಪಡೆದುಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡಬೇಕು.
Kannada BSI Bible 2016
ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸೇವೆ ಮಾಡಿ ಪಡಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನಗೆ ಒಪ್ಪಿಸು; ನಾನು ಹೋಗುತ್ತೇನೆ. ನಾನು ನಿನಗೆ ಮಾಡಿದ ಸೇವೆ ನಿನಗೆ ತಿಳಿದೇ ಅದೆ ಎಂದು ಹೇಳಲು
Kannada Bible (KNCL) BSI 2016
ನಾನು ದುಡಿದು ಪಡೆದ ಹೆಂಡತಿಯರನ್ನೂ ಮಕ್ಕಳನ್ನೂ ಕಳಿಸಿಕೊಡಿ, ನಾನು ಹೊರಡುತ್ತೇನೆ. ನಿಮಗೆ ನಾನು ಮಾಡಿದ ಸೇವೆ ಎಷ್ಟೆಂದು ನಿಮಗೇ ತಿಳಿದಿದೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಯಾರಿಗೋಸ್ಕರ ನಿನಗೆ ಸೇವೆ ಮಾಡಿದೆನೋ, ಆ ನನ್ನ ಹೆಂಡತಿಯರನ್ನೂ, ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀಯೆ,” ಎಂದನು.