Genesis 30:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲಾಬಾನನು ಅವನಿಗೆ, “ನಾನು ಹೇಳುವುದನ್ನು ಕೇಳು; ಯೆಹೋವನು ನಿನ್ನ ನಿಮಿತ್ತವಾಗಿ ನನ್ನನ್ನು ಆಶೀರ್ವದಿಸಿದ್ದಾನೆಂದು ನನಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.
Kannada BSI Bible 2016
ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲಾಬಾನನು ಅವನಿಗೆ - ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ಇರು; ಯೆಹೋವನು ನಿನ್ನ ನಿವಿುತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದಿದ್ದೇನೆ.
Kannada Bible (KNCL) BSI 2016
ಅದಕ್ಕೆ ಲಾಬಾನನು, “ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ತಂಗಿರು. ಸರ್ವೇಶ್ವರ ಸ್ವಾಮಿ ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಗೊಳಿಸಿದ್ದಾರೆಂದು ಶಾಸ್ತ್ರೋಕ್ತವಾಗಿ ತಿಳಿದುಕೊಂಡಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ.