Genesis 30:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು, “ನಾನು ನಿನಗೋಸ್ಕರ ಕಷ್ಟಪಟ್ಟು ಕೆಲಸ ಮಾಡಿರುವುದು ನಿನಗೆ ಗೊತ್ತಿದೆ. ನಾನು ನಿನ್ನ ಕುರಿಮಂದೆಗಳನ್ನು ನೋಡಿಕೊಂಡಿದ್ದರಿಂದ ಅವು ಹೆಚ್ಚಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯಾಕೋಬನು, “ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಪ್ರಾಣಿಗಳು ಅಭಿವೃದ್ದಿಯಾದುದ್ದನ್ನೂ ನೀನು ಬಲ್ಲೇ.
Kannada BSI Bible 2016
ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯಾಕೋಬನು - ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಗಳು ಅಭಿವೃದ್ಧಿಯಾದದ್ದನ್ನೂ ನೀನು ಬಲ್ಲೆ.
Kannada Bible (KNCL) BSI 2016
ಅದಕ್ಕೆ ಯಕೋಬನು, “ನಾನು ನಿಮಗೆ ಎಷ್ಟು ಸೇವೆ ಮಾಡಿದ್ದೇನೆಂಬುದೂ ನನ್ನ ವಶದಲ್ಲಿದ್ದ ನಿಮ್ಮ ಪಶುಪ್ರಾಣಿಗಳು ಹೇಗೆ ಅಭಿವೃದ್ಧಿ ಆಗಿವೆ ಎಂಬುದನ್ನೂ ನೀವೇ ಬಲ್ಲಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯಾಕೋಬನು ಅವನಿಗೆ, “ನಾನು ನಿನಗೆ ಮಾಡಿದ ಸೇವೆಯನ್ನೂ, ನಿನ್ನ ಪಶುಗಳು ನನ್ನ ಬಳಿಯಲ್ಲಿ ಹೇಗೆ ಅಭಿವೃದ್ಧಿ ಆಗಿವೆ ಎಂಬುದನ್ನೂ ನೀನು ಬಲ್ಲೆ.