Genesis 30:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನ ಲಾಬಾನನು ಚುಕ್ಕೆಗಳಿದ್ದ ಎಲ್ಲಾ ಹೋತಗಳನ್ನೂ ಮೇಕೆಗಳನ್ನೂ ಕಪ್ಪಾದ ಕುರಿಗಳನ್ನೂ ಪ್ರತ್ಯೇಕಿಸಿದನು. ಲಾಬಾನನು ತನ್ನ ಗಂಡುಮಕ್ಕಳಿಗೆ ಆ ಕುರಿಗಳನ್ನು ನೋಡಿಕೊಳ್ಳಲು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ದಿನ ಲಾಬಾನನು ಆಡುಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದುವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು.
Kannada BSI Bible 2016
ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ದಿನ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ ಕುರಿಗಳಲ್ಲಿ ಕಪ್ಪಾಗಿದ್ದವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿ
Kannada Bible (KNCL) BSI 2016
ಆದರೆ ಅದೇ ದಿನ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ, ಮಚ್ಚೆ ಇದ್ದವುಗಳನ್ನೂ ಅಂದರೆ, ಸ್ವಲ್ಪ ಬಿಳುಪಾದ ಬಣ್ಣ ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಂದು ಬಣ್ಣವಿದ್ದವುಗಳನ್ನೂ ವಿಂಗಡಿಸಿ, ತನ್ನ ಪುತ್ರರ ಕೈಗೆ ಕೊಟ್ಟನು.