Genesis 30:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ಚುಕ್ಕೆಯುಳ್ಳ ಮತ್ತು ಕಪ್ಪಾಗಿರುವ ಆಡುಕುರಿಗಳನ್ನು ಮಂದೆಯ ಇತರ ಆಡುಕುರಿಗಳಿಂದ ಬೇರ್ಪಡಿಸಿದನು. ಯಾಕೋಬನು ತನ್ನ ಪಶುಗಳನ್ನು ಲಾಬಾನನ ಪಶುಗಳಿಂದ ಪ್ರತ್ಯೇಕವಾಗಿರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದು ಪ್ರತ್ಯೇಕಿಸಿದನು ಮತ್ತು ಲಾಬಾನನ ಆಡು ಕುರಿಗಳ ಮುಖಗಳನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಕುರಿಗಳ ಕಡೆಗೆ ತಿರುಗಿಸಿದನು.
Kannada BSI Bible 2016
ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದು ಪ್ರತ್ಯೇಕಿಸಿದನು; ಮತ್ತು ಲಾಬಾನನ ಆಡುಕುರಿಗಳ ಮುಖಗಳನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಕುರಿಗಳ ಕಡೆಗೆ ತಿರುಗಿಸಿದನು.
Kannada Bible (KNCL) BSI 2016
ಯಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದೇ ಬೇರ್ಪಡಿಸಿದನು; ಲಾಬಾನನ ಆಡುಕುರಿಗಳ ಮುಖವನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಆ ಕುರಿಗಳ ಕಡೆಗೆ ತಿರುಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಕುರಿಗಳನ್ನು ಬೇರೆ ಮಾಡಿ, ಲಾಬಾನನ ಮಂದೆಯಲ್ಲಿರುವ ರೇಖೆಗಳುಳ್ಳ ಆಡುಕುರಿಗಳೆದುರಾಗಿಯೂ ಕಂದು ಬಣ್ಣ ಉಳ್ಳವುಗಳೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ, ಅವುಗಳನ್ನು ಬೇರೆ ಇಟ್ಟುಕೊಂಡನು.