Genesis 30:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಬಲಹೀನವಾದ ಪ್ರಾಣಿಗಳು ಸಂಗಮ ಮಾಡುವಾಗ ಯಾಕೋಬನು ಆ ಕೊಂಬೆಗಳನ್ನು ಅಲ್ಲಿ ಇಡುತ್ತಿರಲಿಲ್ಲ. ಆದ್ದರಿಂದ ಬಲಹೀನವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಲಾಬಾನನಿಗೆ ಸೇರಿಕೊಂಡವು. ಬಲವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಯಾಕೋಬನಿಗೆ ಸೇರಿಕೊಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಾಗಿ ಬಲಹೀನವಾದ ಹಿಂಡು ಲಾಬಾನನ ಪಾಲಿಗೆ ಬಂದವು, ಬಲಿಷ್ಠವಾದವುಗಳು ಯಾಕೋಬನು ಪಾಲಿಗೆ ಬಂದವು.
Kannada BSI Bible 2016
ಆದರೆ ಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನ ವಾದವುಗಳು ಲಾಬಾನನಿಗೂ ಬಲವಾದವುಗಳು ಯಾಕೋಬನಿಗೂ ಆದವು.ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಬಲವಿಲ್ಲದವುಗಳು ಲಾಬಾನನ ಪಾಲಿಗೆ ಬಿದ್ದವು, ಬಲಿಷ್ಠವಾದವುಗಳು ಯಾಕೋಬನ ಪಾಲಿಗೆ ಬಿದ್ದವು.
Kannada Bible (KNCL) BSI 2016
ಹೀಗೆ ಬಲವಿಲ್ಲದವುಗಳು ಲಾಬಾನನ ಪಾಲಿಗೆ, ಬಲಿಷ್ಠವಾದವುಗಳು ಯಕೋಬನ ಪಾಲಿಗೆ ಬಂದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕುರಿಗಳು ಬಲಹೀನವಾಗಿದ್ದಾಗ, ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನವಾದವುಗಳು ಲಾಬಾನನಿಗೂ, ಬಲವಾದವುಗಳು ಯಾಕೋಬನಿಗೂ ಆದವು.