Genesis 31:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ದಿನ ಲಾಬಾನನ ಗಂಡುಮಕ್ಕಳು ಮಾತಾಡುತ್ತಿರುವುದನ್ನು ಯಾಕೋಬನು ಕೇಳಿಸಿಕೊಂಡನು. ಅವರು, “ನಮ್ಮ ತಂದೆ ಹೊಂದಿದ್ದ ಪ್ರತಿಯೊಂದನ್ನೂ ಯಾಕೋಬನು ತೆಗೆದುಕೊಂಡು ಐಶ್ವರ್ಯವಂತನಾಗಿದ್ದಾನೆ; ಅವನು ನಮ್ಮ ತಂದೆಯ ಐಶ್ವರ್ಯವನ್ನೆಲ್ಲ ತೆಗೆದುಕೊಂಡಿದ್ದಾನೆ” ಎಂದು ಹೇಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.
Kannada BSI Bible 2016
ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು; ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟು ಐಶ್ವರ್ಯವುಂಟಾಯಿತು ಎಂಬದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.
Kannada Bible (KNCL) BSI 2016
ಲಾಬಾನನ ಮಕ್ಕಳು, “ನಮ್ಮ ತಂದೆಯ ಆಸ್ತಿಪಾಸ್ತಿಯೆಲ್ಲ ಯಕೋಬನ ಪಾಲಾಯಿತು. ನಮ್ಮ ತಂದೆಯ ಆಸ್ತಿಯಿಂದಲೇ ಅವನು ಇಷ್ಟು ಐಶ್ವರ್ಯವನ್ನು ಶೇಖರಿಸಿದ್ದು,” ಎಂದು ಆಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲಾಬಾನನ ಮಕ್ಕಳು, “ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತೆಗೆದುಕೊಂಡು, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ,” ಎಂದು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.