Genesis 31:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅವನು ಇಲ್ಲದಿದ್ದಾಗ, ರಾಹೇಲಳು ಅವನ ಮನೆಯೊಳಗೆ ಹೋಗಿ, ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.
Kannada BSI Bible 2016
ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.
Kannada Bible (KNCL) BSI 2016
ಇತ್ತ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅದೇ ಸಮಯದಲ್ಲಿ ರಾಖೇಲಳು ತನ್ನ ತಂದೆಯ ಮನೆಯಲ್ಲಿದ್ದ ಕುಲದೈವಗಳ ವಿಗ್ರಹಗಳನ್ನು ಕದ್ದುಕೊಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕೆ ಹೋಗಿದ್ದನು. ಆಗ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.