Genesis 31:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಲಾಬಾನನು ತನ್ನ ಜನರನ್ನು ಕರೆದುಕೊಂಡು ಯಾಕೋಬನನ್ನು ಬೆನ್ನಟ್ಟಿದನು. ಏಳು ದಿನಗಳಾದ ಮೇಲೆ ಲಾಬಾನನು ಯಾಕೋಬನನ್ನು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಕಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.
Kannada BSI Bible 2016
ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಬಂಧು ಜನರನ್ನು ಕೂಡಿಕೊಂಡು, ಏಳುದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ, ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.
Kannada Bible (KNCL) BSI 2016
ಅವನು ಕೂಡಲೆ ತನ್ನ ಬಂಧುಬಳಗದವರನ್ನು ಕರೆದುಕೊಂಡು, ಏಳು ದಿನ ಪ್ರಯಾಣಮಾಡಿ ಯಕೋಬನನ್ನು ಹಿಂದಟ್ಟಿ ಗಿಲ್ಯಾದ್ ಗುಡ್ಡಗಾಡಿನಲ್ಲಿ ಸಂಧಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ತನ್ನ ಬಂಧುಗಳನ್ನು ಕರೆದುಕೊಂಡು, ಅವನನ್ನು ಬೆನ್ನಟ್ಟಿ, ಏಳು ದಿನ ಪ್ರಯಾಣಮಾಡಿ, ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.